ಸಹಿಷ್ಣುತೆ-ಅಸಹಿಷ್ಣುತೆ
ಅದೊಂದು ಅನಿವಾಸಿ ಭಾರತೀಯರ ಚಿಕ್ಕದೊಂದು ಸಂಘ. ಹತ್ತಾರು ವರ್ಷಗಳಿಂದ, ಎಲ್ಲ ಸಂಘಗಳು ಕಾಣುವ ಏಳು ಬೀಳುಗಳನ್ನು, ಒಳಿತು ಕೆಡಿಕುಗಳನ್ನು, ಸಂಘಟನೆ-ವಿಘಟನೆಗಳನ್ನು ಕಾಲ ಕಾಲಕ್ಕೆ ಅನುಭವಿಸಿಯೂ ಕ್ರಿಯಾತ್ಮಕವಾಗಿದ್ದ ಒಂದು ಚಿಕ್ಕ ಊ ರಿನ ಚಿಕ್ಕ ಸಮ್ಘಟನೆ.ನೆಲ ಜಾಲಗಳನ್ನು ಬಿಟ್ಟು ಬಂದಿಳಿದ ಭಾರತೀಯರನ್ನು ಒಂದು ಚಾವಣಿಯಡಿ ತಂದು, ವರುಷ ಕ್ಕಿಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿ ತನ್ನ ಕೈಲಾದಷ್ಟು ಚಾರಿಟಿಗಳನ್ನು ಮಾಡುತ್ತಿದ್ದ ಒಂದು ಸಂಸ್ಥೆ. ದೀಪಾವಳಿ, ಹೋಳಿ ಹಬ್ಬ, ,ಆಹಾರ ಮೇಳ, ಹೊಸವರ್ಷಾಚರಣೆ ಗಳು ಅದರ ಪ್ರಮುಖ ಕಾರ್ಯಕ್ರಮಗಳಾಗಿದ್ದವು.
ಭಾರತೀಯರೆಂದಮೇಲೆ ವೈವಿಧ್ಯತೆ ಸ್ವಾಭಾವಿಕವಷ್ಟೇ. ಹಲವು ಭಾಷೆ, ವೇಷ, ಆಚಾರ ವಿಚಾರ, ಧರ್ಮ ಪಂಗಡಗಳ ಗೂಡು ಎಂಬುದನ್ನು ಹೇಳಬೇಕಿಲ್ಲ. ಬಹುತೇಕರು ಹಿಂದೂ ಧರಮದವರಾಗಿದ್ದು ಮೊದಲಿಗೆ ಎರಡು ಮುಸ್ಲಿಂ ಹಾಗೂ ಎರೆಡು ಕ್ರಿಸ್ಚಿಯನ್ ಪಂಗಡಗಳು ಇದರಲ್ಲಿದ್ದವು. ಕ್ರಿಶ್ಚಿಯನ್ ಪಂಗಡಗಳವರು ಕ್ಯಠೋಲಿಕ್ ಅನುಯಾಯಿಗಳಗಿದ್ದು ಹೊಸವರ್ಷಾಚರಣೆ ಹೊರತು ಪಡಿಸಿ ಉಳಿದ ಹಬ್ಬಾಚರಣೆಯಲ್ಲಿ ಪಾಲ್ಗೊಂಡಿದ್ದು ನಾನು ನೋಡಿರಲಿಲ್ಲ. ಮುಸ್ಲಿಂ ಕುಟುಂಬಗಳಲ್ಲಿ ಒಂದು, ಅವರೇ ಹೇಳಿಕೊಂಡಂತೆ ‘ಅಹ್ಮದೀಯ’ ಎಂಬ ಶಾಖೆಗೆ ಸೇರಿದ ಜನ. ಇನ್ನೊಂದು, ನನಗೆ ತಿಳಿಯದು, ನಾನೂ ಕೇಳಿಲ್ಲ, ಅವರೂ ಹೇಳಿಲ್ಲ.
ಯಾವ ಭೇದಭಾವವೂ ಇಲ್ಲದೆ ಎಲ್ಲರೂ ಸೇರಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೆವು. ಬಾಲಿವುಡ್ ಹಾಡುಗಳು, ಕಿರು ಪೌರಾಣಿಕ ಪ್ರಸಂಗಗಳು, ಶಾಸ್ತ್ರೀಯ ಸಂಗೀತ ಹಾಗೂ ನೃತ್ಯರೂಪಕಗಳು ಕಾರ್ಯಕ್ರಮದ ಭಾಗಗಳಾಗಿದ್ದವು. ನಮ್ಮ ಭರತನಾಟ್ಯದ ಶಿಕ್ಷಕಿಗೆ ಅವಕಾಶ ಸಿಕ್ಕಾಗ, ಕೆಲವು ಸೂಫಿ ಸಂತರ ಹಾಡುಗಳಿಗೂ ಮಕ್ಕಳಿಂದ ಹೆಜ್ಜೆ ಹಾಕಿಸುತ್ತಿದ್ದಳು. ಸದಸ್ಯರ ಕುಟುಂಬಗಳು ಉತ್ಸಾಹದಿಂದಲೇ ಭಾಗವಹಿಸುತ್ತಿದ್ದವು.
ಬದಲಾವಣೆ ಯುಗದ ಧರ್ಮ.,ಕಾಲಕ್ರಮದಲ್ಲಿ ಮಂಗಳೂರು, ಹೈದರಾಬಾದು, ಉತ್ತರ ಪ್ರದೇಶ ಹಾಗೂ ಬಿಹಾರಗಳ ಮುಸ್ಲಿಮ್ ಕುಟುಂಬಗಳು ಊರಿಗೆ ಸೇರ್ಪಡೆಯಾದವು,. ನಾವು ಸಹ ಸಂಘದ ಸದಸ್ಯತ್ವಕ್ಕೆ ಅವರನ್ನು ಆಹ್ವಾನಿಸಿ ಸೆರಿಸಿಕೊಂಡೆವು.. ಮೊದಲವರ್ಷ ಏನೂ ತೊಂದರೆ ಯಿರಲಿಲ್ಲ. ಎರಡನೇ ವರ್ಷದ ದೀಪಾವಳಿ ಸಮಯಕ್ಕೆ ಈದ್ ಹಬ್ಬವೂ ಬರುವ ಕಾರಣ ದೀಪಾವಳಿ-ಈದ್ ಎಂಬ ಯುಗಳ ಹಬ್ಬವಾಗಿ ಕಾರ್ಯಕ್ರಮ ನಡೆಸಬೇಕೆಂಬ ಕೋರಿಕೆ ಬಂತು. ಸಮಿತಿ ಸರ್ವಾನುಮತದಿಂದ ಅಂಗಿಕರಿಸಿ, ಅದಕ್ಕೆಂದೇ ಹೊಸ ಭಿತ್ತಿ ಪಟವನ್ನು ಬರೆಸಲಾಯಿತು. ಏಕತೆ- ಸಮಗ್ರತೆಯ ನಡೆಯೆಂದು ಎಲ್ಲರೂ ಸಂತೋಷಿಸಿದರು!
ಆದರನಂತರ ಹೋಳಿ ಹಬ್ಬಅತಿ ಧಾರ್ಮಿಕ ಆಚರಣೆಯೆಂದೂ, ಸಮುದಾಯದ ಎಲ್ಲರ ಆಶಯಕ್ಕೆ ಅನುಗುಣವಾಗಿಲ್ಲವೆಂದೂ, ಅದನ್ನು ಸೆಕ್ಯುಲರ್ ಅದ ಅಚರಣೇಯಾಗಿ ಬದಲಾಯಿಸಬೇಕೆಂಬ ಕೋರಿಕೆ ಬಂತು. ಹೋಳಿ ಹಬ್ಬ ಎಂಬುದನ್ನು ವಸಂತೋತ್ಸವ ಎಂಬ ಹೆಸರಿನಿಂದ ಕರೆಯಲಾಯಿತು. ಬಣ್ಣದ ಬದಲಿಗೆ ಹೂವಿನ ಪಕಳೆಗಳನ್ನು ಚಿಮ್ಮಲಾಯಿತು. ಕೆಲವರು ಗೊಣಗುಟ್ಟಿದರೂ ಬದಲಾವಣೆಯನ್ನು ಒಪ್ಪಿಕೊಂಡರು. ಆದರೆ ಬಣ್ಣದ ಎರಚಾಟವಿಲ್ಲದೆ ಮಕ್ಕಳು ನಿರಾಶರಾಗಿದ್ದು ಸುಳ್ಳಲ್ಲ.
ಮತ್ತೊಂದು ವರುಷ ಕಳೆದು ಆ ವರುಷದ ದೀಪಾವಳಿ ಕಾರ್ಯಕ್ರಮದ ಮುಸ್ಲಿಂ ಸಮುದಾಯದ ಮಕ್ಕಳು ವಿಷ್ಣುವಿನ ದಶಾವತಾರದ ನೃತ್ಯರೂಪಕವೊಂದರಲ್ಲಿ ಪಾಲ್ಗೊಳ್ಳಲಿಲ್ಲ.! ನಮ್ಮ ನೃತ್ಯ ಶಿಕ್ಷಕಿ ಅವರಿಗಾಗಿ ಮತ್ತೊಂದು ಹಾಡೊಂದಕ್ಕೆ ತರಬೇತಿ ಕೊಡಬೇಕಾಗಿ ಬಂತು. ಕೆಲಸದೊತ್ತಡದಲ್ಲಿ ಅವಳು ನಲುಗಿದ್ದಂತೂ ನಿಜ. ಆದರೆ ಮೊದಲು ಹೇಳಿದ ಅಹ್ಮದೀಯ ಕುಟುಂಬ ಇದಕ್ಕೆ ಹೊರತು. ಎಲ್ಲ ಕಾರ್ಯಕ್ರಮಗಳಲ್ಲಿ ಅವರು ಭಾಗಿಗಳಾಗಿದ್ದರು.
ನಂತರದ ವರ್ಷದಲ್ಲಿ ಹಬ್ಬಾಚರಣೆಗಳು ಎಲ್ಲರ ಧಾರ್ಮಿಕ ನಂಬಿಕೆಗಳಿಗೆ ಅನುಗುಣವಾಗಿರದ ಕಾರಣ ದೀಪಾವಳಿ ಅಡಿಯಲ್ಲಿ ಲಕ್ಷ್ಮಿ ಪೂಜೆ ಕೂದದೆಂದೂ, ದೀಪವನ್ನು ಬೆಳಗಿ ಕಾರ್ಯಕ್ರಮ ಉದ್ಘಾಟಿಸುವುದು ‘’ಸೆಕ್ಯುಲರ್’’ ಅಲ್ಲವೆಂದು ಆಕ್ಷೇಪಣೆ ಬಂತು. ಸಮಿತಿಯ ಸಭೆಯಲ್ಲಿ ಕೆಲವರು ಸಮಾನತೆಯ ಮನೋಭಾವದ ಗುಂಗಿನಲ್ಲಿ ಅನುಮೋದಿಸಿದರು, ಕೆಲವರು ಸುಮ್ಮನಿದ್ದರು ಮತ್ತೆ ಕೆಲವರು ಮುಖ ಮುಖ ನೋಡಿಕೊಂಡರು- ತಮ್ಮ ಅಸಮ್ಮತಿಯನ್ನು ಹೊರಹಾಕಲು ಹಿಂಜರಿದರು. ನಾನು ಶಾಂತವಾಗಿ ಪ್ರತಿಭಟಿಸಿದೆ. ನಮ್ಮದು ಭಾರತೀಯ ಪರಂಪರೆಯನ್ನು ಬಿಂಬಿಸುವ ಸಂಘಟನೆಯಾಗಿದ್ದಲ್ಲಿ, ಭಾರತಿಯ ಸಂಸ್ಕೃತಿಯನ್ನು ಅಭಿವ್ಯಕ್ತಗೊಳಿಸುವ ಆಚರಣೆಗಳನ್ನು ಅನುಸರಿಸಲು ಹಿಂದೆ ಮುಂದೆ ನೋಡಬೇಕಾದ ಪ್ರಮೆಯವಿಲ್ಲ. ಭಾರತವೆಂದರೆ ಬಾಲಿವುಡ್ ಅಲ್ಲ, ಅದನ್ನು ಮೀರಿದ ಒಂದು ವಿಶಿಷ್ಟ ವ್ಯವಸ್ಥೆ,. ಅದನ್ನು ಬಿಟ್ಟು ಕಾರ್ಯಕ್ರಮ ರೂಪಿಸುವುದಾದರೆ ಅದಕ್ಕಿಂತ ದೊಡ್ಡ ಅಭಾಸ ಅಸಂಬದ್ಧತೆ ಇರಲಾರದು. ಭಾರತಿಯ ಪರಮ್ಪರೆಯ ವೈಶಿಷ್ಟ್ಯವೆಂದರೆ ಮನುಷ್ಯನ ಜೀವನದೆಲ್ಲ ಕೋನಗಳಲ್ಲಿ ತಾತ್ತ್ವಿಕ ಧಾರ್ಮಿಕ, ಲೌಕಿಕ,ಪಾರಮಾರ್ಥಿಕ ಸಮಗ್ರತೆಯ ಆಯಾಮಗಳು ಹಾಸುಹೊಕ್ಕಾಗಿವೆ. ಇದು ಕಲಾ ಪ್ರಾಕಾರಗಳಲ್ಲಿ ವ್ಯಕ್ತಗೊಂಡಿದೆ. ಅದು ಸಂಗೀತ, ಸಾಹಿತ್ಯ, ನೃತ್ಯ, ಶಿಲ್ಪ ,ಚಿತ್ರಕಲೆಗಳಿರಬಹುದು- ಅದು ಆಧ್ಯಾತ್ಮ ಪುರಾಣಗಳ ಜತೆಗೆ ಹ್ಹಾಸುಹೊಕ್ಕಾಗಿ ಹೊಸೆದುಕೊಂದಿರುವ ಒಂದು ಅಪರೂಪದ ಜೀವನ ದರ್ಶನ. ಅದರ ಹಿಂದಿನ ಆಶಯಗಳನ್ನು ಗುರಿತಿಸಿ ಗೌರವಿಸಬೇಕೇ ವಿನ್ಃ ಭೇದ ಎಣಿಸಬಾರ್ದೆಂದು ವಾದಿಸಿದೆ. ಈ ತತ್ವಗಳನ್ನು ಮುಂದಿನಪೀಳಿಗೆಗೆ ದಾಟಿಸುವ ಹೊಣೆ ನಮ್ಮ ಮೇಲಿದ್ದಲ್ಲಿ , ಈ ಸಂಘಟನೆಗೂ ಒಂದು ಅರ್ಥವಿದೆ, ಹಬ್ಬಾಚರಣೆಗೂ ಒಂದು ಅರ್ಥವಿದೆ. ಇಲ್ಲವಾದಲ್ಲಿ ದೀಪಾವಳಿ ಹೆಸರಿನಲ್ಲಿ ನವೆಂಬರ್ ತಿಂಗಳ ಈ ಕಾರ್ಯಕ್ರಮಕ್ಕೆ ಯಾವುದೇ ಅರ್ಥವಿಲ್ಲ , ನಾನು ಒಪ್ಪಲಾರೆ ಎಂದೆ.
ನನ್ನ ವಾದ ತೀವ್ರವಾದವೆಂದೂ, ಅದು ಸೆಕ್ಯುಲರ್ ಅಲ್ಲವೆಂದೂ, ನಮ್ಮ ನಂಬಿಕೆಯನ್ನು ಇತರರ ಮೇಲೆ ಹೇರುವ ಹುನ್ನಾರವೆಂದು ಆಕ್ಷೇಪಣೆ ಬಂತು. ನೀವು ಒಪ್ಪದ ಆಚರಣೆಗಳನ್ನು ಕೈಬಿಡಲು ಒತ್ತಡ ಹಾಕುತ್ತಿರುವಿರಾದರೆ ನಿಮ್ಮದು ಸೆಕ್ಯುಲರ್ ಹೇಗಾಯಿತು? ಸಹಿಷ್ಣುತೆ ನಿಮ್ಮ ನಡೆಯಲ್ಲಿ ಎಲ್ಲಿದೆ ಎಂಬ ಪ್ರಶ್ನೆಗೆ, ನಾವು ನಮ್ಮ ಆಚರಣೆಗಳನ್ನು ವೇದಿಕೆಯ ಮೇಲೆ ತರುವುದಿಲ್ಲ ಹಾಗಾಗಿ ನೀವೂ ಸಹ ತರಬಾರದೆಂಬ ವಾದ ಬಂತು!!
ಅಲ್ಲಿಗೆ, ನಾನು ಸೆಕ್ಯುಲರ್ ಎಂಬುದರ ಅರ್ಥವನ್ನು ಅಲ್ಲಿರುವ ಸದಸ್ಯರು ಹೇಗೆ ಅರ್ಥೈಸಿಕೊಂಡಿದಾರೆಂಬ ಪ್ರಶ್ನೆ ಮಾಡಿದಾಗ ಯಾರಲ್ಲೂ ಸ್ಪಷ್ಟ ಉತ್ತರವಿರಲಿಲ್ಲ. ಧಾರ್ಮಿಕ ಆಚರಣೆಗಳನ್ನು ಇನ್ನೊಬ್ಬರು ಒಪ್ಪದಿದ್ದಾಗ ಕೈಬಿಡುವುದೇ ಸೆಕ್ಯುಲರ್ ಎಂಬ, ಇತರರ ಆಚರಣೆ ನಂಬಿಕೆಗಳನ್ನು ಸಹಿಸಿಕೊಳ್ಳುವ ಮನೋಭಾವವೆಂದೂ ಗೊಂದಲಮಯ definition ಕೊಟ್ಟರು.
ನನ್ನ ಪ್ರಕಾರ ಸೆಕ್ಯುಲರ್ ಎಂಬುದು ಆಂತರ್ಯದಲ್ಲಿ ಗೌರವ ಎಂಬ ಹೂರಣವನ್ನು ಇಟ್ಟುಕೊಂಡ ಮನಸ್ಥಿತಿ ಎಂದೂ, ಅದು ಕೇವಲ ಸಹಿಸಿಕೊಳ್ಳುವ ಸ್ಥಿತಿ ಅಲ್ಲ. ಸಹಿಸಿಕೊಳ್ಳುವವ ಅಸಹಿಷ್ಣು ಆಗಬಹುದು ಆದರೆ ಗೌರವ ಭಾವ ಒಂದು absolute ಸ್ಥಿತಿ. ಪರಸ್ಪರರ ಆಚರಣೆಗಳಿಗೆ ಗೌರವ ಕೊಟ್ಟು ಬೆಳೆಸುವ ಸ್ಥಿತಿಯೇ ಸೆಕ್ಯುಲರ್-ಸಹಿಷ್ಣುತೆ ಎಂಬ ಪ್ರತಿವಾದ ಹೂಡಿದೆ. ನಿಮ್ಮಲ್ಲಿ ಸಾಂಸ್ಕೃತಿಕವಾದ ಸರಕಿದ್ದರೆ ಅದನ್ನು ವೇದಿಕೆಗೆ ತನ್ನಿ. ಸಂತೋಷವಾಗಿ ಅಚರಿಸೋಣ. ಇಲ್ಲದಿದ್ದಲ್ಲಿ ಉಳಿದವರದ್ದು ನೋಡಿ ಸಂತೋಷಿಸಿ. ನಾವೂ ಮಾಡೆವು ನಿಮಗೂ ಬಿಡೆವು ಎಂಬ ಧೋರಣೆ ಆರೊಗ್ಯಕರವಲ್ಲ. ನಿರ್ಧಿಷ್ಟ ಗುರಿಗಳಿಲ್ಲದಿದ್ದರೆ ನಮ್ಮದು ಅರ್ಥಹೀನ ಸಂಘಟನೆಯಾಗುತ್ತದೆ ಎಂಬ ವಾದವನ್ನು ಮುಂದಿಟ್ಟೆ. ಕೆಲವರು ಈಗ ನನ್ನನ್ನು ಬೆಂಬಲಿಸಿದರು. ಕಾರ್ಯಕ್ರಮಗಳು ಯಥಾ ಪ್ರಕಾರ ನಡೆದವು. ಧರ್ಮ ಬಾಹಿರವಾದ ಅಂಶಗಳಿದ್ದ ಕಾರಣ ದೇಶಬಾಂಧವರು ಊಟದ ಹೊತ್ತಿಗೆ ಆಗಮಿಸಿ ತಿಂದುಂಡು ನಡೆದರು. ನಂತರದ ವರ್ಷಗಳಲ್ಲಿ ಮೊದಲಿದ್ದ ಎರೆಡು ಕುಟುಂಬಗಳನ್ನು ಹೊರತು ಪಡಿಸಿ ಉಳಿದ ಮುಸ್ಲಿಂ ಕುಟುಂಬಗಳು ಕಾರ್ಯಕ್ರಮಕ್ಕೆ ಬರುವುದನ್ನ್ನು ನಿಲ್ಲಿಸಿಯೇ ಬಿಟ್ಟರು.
ಮೊದಲು ಹೇಳಿದಂತೆ, ಕ್ರಿಶ್ಚಿಯನ್ ಕುಟುಂಬಗಳು ಮೊದಲಿನಿಂದಲೂ ಈ ಹಬ್ಬಾಚರಣೆಯಲ್ಲಿ ಪಾಲ್ಗೊಂದೇ ಇರಲಿಲ್ಲ. ನಮ್ಮೂರಿನ ಸಕಲ ( ನನ್ನನ್ನು ಹೊರತು ಪಡಿಸಿ) ಹಿಂದೂಗಳ ಮನೆಯಲ್ಲಿ ಕ್ರಿಸ್ಮಸ್ ಮರವನ್ನು, ಈಸ್ತರ್ ಮೊಟ್ಟೆ-ಮೊಲಗಳನ್ನು ಕಂಡಿದ್ದೇನೆ ಆದರೆ ಇತರರ ಮನೆಗಳಲ್ಲಿ ನಮ್ಮ ದೀಪಾವಳಿಯನ್ನೋ, ಗಣೇಶ ಚತುರ್ಥಿಯನ್ನೋ ಆಚರಿಸುವುದು ನೋಡಿಲ್ಲ.
ಇದು, ಒಂದು ಸಂಘಟನೆಯ ಕಾರ್ಯದರ್ಶಿಯಾಗಿ ನಾನು ಕಂಡುಂಡ ಅನುಭವ. ವೈಯಕ್ತಿಕವಾಗಿ ನಾನು ಹಿಂದು (ಸನಾತನ) ಧರ್ಮದ ಅನುಯಾಯಿ-ಅಭಿಮಾನಿಯಾಗಿದ್ದರೂ ಇತರ ಧರ್ಮಾಚರಣೆಗಳನ್ನು ಅವಿರುವಂತೆಯೇ ಗೌರವಿಸಿದವನು.ಈ ಪರಸ್ಪರ ಗೌರವ ಆದರಗಳ ಗೆರೆ ಮೀರಿದ ಪರಿಸ್ಥಿತಿಯಲ್ಲಿ ನಮ್ಮ ತತ್ವಗಳನ್ನು, ಆದರ್ಶ ನಂಬಿಕೆಗಳನ್ನು ನಿರ್ಭೀತಿಯಿಂದ ಪ್ರತಿಪಾದಿಸಿದವನು. ಇದಕ್ಕಾಗಿ ವೈಯಕ್ತಿಕವಾಗಿ ಸಂಬಂಧಗಳು ಹಳಸಿದರೂ, ಅದನ್ನು ಅನುಭವಿಸಿದವನು. ನನ್ನ ಈ ನಡೆಯನ್ನು ಅಸಹಿಷ್ಣುತೆ ಎಂಬ ಹಣೆಪಟ್ಟಿಯನ್ನು ಕಟ್ಟಿದವರನ್ನೂ ಸಹ ಕಂಡಿದ್ದೇನೆ.
ಇತರ ಧರ್ಮಗಳ/ನಂಬಿಕೆಗಳನ್ನು ಅಂಗೀಕರಿಸುವ ನಮ್ಮ ಮನಸ್ಥಿತಿ ಬೇರೆಯಾದ ಅವರಿಗೇಕೆ ಬರಲಿಲ್ಲ ಎಂಬುದು ಒಂದು ಮೂಲಭೂತವಾದ ಪ್ರಶ್ನೆ. ಕಾರಣ ಇಷ್ಟೆ: ಮಧ್ಯಪ್ರಾಚ್ಯದಲ್ಲಿ ಹುಟ್ಟಿ ಬೆಳೆದ ಈ ಸೆಮೆಟಿಕ್ ರಿಲಿಜನ್ ಗಳು( ಅಬ್ರಹಾಮಿಕ್ ರಿಲಿಜನ್) ಗಳು ಏಕ ದೇವ, ಏಕ ತತ್ವ,ಏಕ ಮಾರ್ಗ ಪ್ರತಿಪಾದಕ ರಿಲಿಜನ್ ಗಳು. ಇವುಗಳನ್ನು ನಮ್ಮ ಅರ್ಥದಲ್ಲಿ ಧರ್ಮ ಎನ್ನಲಾಗದು. ಅವು ಮತಗಳು. ಇರುವುದೊಂದೇ ಪುಸ್ತಕ. ಅದನ್ನು ಓದಿಕೊಂಡ ಅನುಯಾಯಿಗಳು ನಂಬುವುದು, ನಮ್ಮ ಮಾರ್ಗವೊಂದೆ ಸತ್ಯ. ಉಳಿದವು ಪಾಪಿಗಳದ್ದು.ಹಾಗಾಗಿ ಅವುಗಳನ್ನು ನಿರ್ಮೂಲನೆ ಮಾಡು ಎಂಬ ಬೋಧನೆ ನೀಡುವ ಧರ್ಮ ಗ್ರಂಥಗಳು ಇಲ್ಲವೇ ಅದರ interpretation ಗಳು. ಹಾಗಾಗಿ ಕ್ರೈಸ್ತ ಧರ್ಮದವರು ಆಮಿಷ ಒತ್ತಡಗಳ ಮೂಲಕ ಮತಪರಿವರ್ತನೆಗೆಲೆಸಿದರೆ, ಇಸ್ಲಾಂ ಭಯ, ಬಲಾತ್ಕಾರ, ಬಳಪ್ರಯೋಗಗಳ ಮಾರ್ಗದಲ್ಲಿ ತಮ್ಮ ಮತವನ್ನು ಹರಡಲು ಪ್ರಚೋದಿಸುತ್ತದೆ. ತಮ್ಮದು ಹೊರತಾಗಿ ಉಳಿದೆಲ್ಲವೂ ಹರಾಮ್ ಆದ ಕಾರಣ ಒಪ್ಪಿಕೊಳ್ಳುವ ಮನೋಭಾವವೇ ಅಲ್ಲಿ ಇರಲಾರದು. ಇದ್ದಗ್ಯೂ ಅದು exception to the rule. ಅಷ್ಟೆ. ಇತ್ತೀಚಿನ ದಿನಗಳಲ್ಲಿ ಇದರ ಪ್ರಖರತೆ ಹೆಚ್ಚಾಗಿರುವುದನ್ನು ನಾವು ಕಾಣುತ್ತಿದ್ದೇವೆ. ಈ ಒಪ್ಪಿಕೊಳ್ಳದ ಮನೋಭಾವವನ್ನು ಬಲಾಧ್ಯ ಪೋರ್ಚುಗೀಸರು ಗೋವಾ ಮತ್ತಿತರ ಜಾಗಗಳಲ್ಲಿ ನಡೆಸಿದ ವಿಧ್ವಂಸಕತೆಯಲ್ಲಿ ಕಾಣಬಹುದು, ಘೋರಿ ಮಹಮ್ಮದನಲ್ಲಿ ಕಾಣಬಹುದು, ವಿಜಯನಗರದ ಬೀದಿಗಳಲ್ಲಿ ಕಾಣಬಹುದು,,ಕಾಶ್ಮೀರಿ ಪಂಡಿತರ ಮಾರಣಹೋಮದಲ್ಲಿ ಕಾಣಬಹುದು, ಇಂದಿಗೂ ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ಹಿಂದುಗಳ ಮೇಲೆ ಕ್ರಿಶ್ಚಿಯನ್ ಪಂಗಡಗಳು ನಡೆಸುತ್ತಿರುವ ದೌರ್ಜನ್ಯದಲ್ಲಿ ಕಾಣಬಹುದು. ಕೇರಳದಲ್ಲಿ ನಡೆಯುತ್ತಿರುವ ದೌರ್ಜನ್ಯದಲ್ಲಿ ಕಾಣಬಹುದು. ಆಂಧ್ರಪ್ರದೇಶದ ಕರಾವಳಿಯಲ್ಲಿ ನಡೆದಿರುವ ಮತಪರಿವರ್ತನಾ ಅಭಿಯಾನದಲ್ಲಿ ಕಾಣಬಹುದು. ಈ ಎಲ್ಲ ಹುನ್ನಾರಗಳ ಹಿಂದಿನ ವಿಸ್ತೃತ ಹಾಗೂ ಆಧುನಿಕ ರೂಪವೇ ಇಂದು ಚರ್ಚೆಗೊಳಗಾಗಿರುವ ಅಸಹಿಷ್ಣುತೆಯ ಕೂಗು.
ಈ ಕೂಗಿನ ಹಿಂದಿನ ರಾಜಕೀಯ ಷದ್ಯಂತ್ರಗಳು, ಸಮಾಜ ವಿರೋಧಿ ಹುನ್ನಾರಗಳು, ಓಲೈಕೆ ರಾಜಕಾರಣ, ಮತಬ್ಯಾಂಕ್ ನ ಹಪಾಹಪಿ, ಇದರ ಹಿಂದಿರುವ ಬುದ್ಧಿಜೀವಿಗಳು, ರಾಜಕಾರಿಣಿಗಳು, ಸಾಹಿತಿಗಳು ಇವರುಗಳ ಬದ್ಧತೆ, ಬಂಡವಾಳಗಲನ್ನು ಗಮನಕ್ಕೆ ತೆಗೆದುಕೊಂಡರೆ ಇವರ ಈ hue & cry ಹಿಂದಿರುವ ಪ್ರಾಮಾಣಿಕತೆ ಬಯಲಾಗುತ್ತದೆ. ಇಷ್ಟುದಿನ ಕೇಳಿಬರದ ಈ ವಿದ್ಯಮಾನ ಇದ್ದಕ್ಕಿದ್ದಂತೆ ಮಾರ್ಮೊಳಗುತ್ತಿರುವುದರ ರಹಸ್ಯ ಎಲ್ಲರಿಗೂ ಉತ್ತರ ಗೊತ್ತಿರುವ ಪ್ರಶ್ನೆಯೇ.
ಸರಕಾರ, ಮಾಧ್ಯಮಗಳು ಸಂಘ ಸಂಸ್ಥೆಗಳು ಎಲ್ಲವೂ ತಮ್ಮ ಹಿಡಿತದಲ್ಲಿದ್ದಾಗ ತಮಗೆ ಅನುಕೂಲವಾಗುವ ವಾತಾವರಣ ಇದ್ದಾಗ ಕೇಲಿಬರದ ಈ ಕೂಗು ಇಂದು ಕೇಳುತ್ತಿರುವ ಕಾರಣ, ಪಟ್ಟಭದ್ರರ ಅಡಿ ಅಲುಗುತ್ತಿರುವುದಷ್ತೆ. ತಿರುಚಿದ ಇತಿಹಾಸವನ್ನು ಪ್ರಶ್ನಿಸಿದಾಗ ರೋಮಿಲಾ ಥಾಪರ್ ಅಸಹಿಷ್ಣುತೆಯ ಕೂಗು ಹಾಕುತ್ತಾಳೆ, ಯಾಕೂಬ್ ಮೆಮನ್ ನನ್ನು ಗಲ್ಲಿಗೇರಿಸಿದಾಗ ದೇಶದೆಲ್ಲ ಬುದ್ಧಿಜೀವಿಗಳು ಒಕ್ಕೊರಲಿನಿಂದ ಪ್ರತಿಭಟಿಸುತ್ತಾರೆ, ನಕ್ಸಲರನ್ನು ಮಟ್ಟಹಾಕಿದರೆ ಮಾನವ ಹಕ್ಕುಗಳ ಪ್ರಶೆ ಏಳುತ್ತದೆ, ಯಾವುದೊ ಒಂದು ಮುಸ್ಲಿಮನ ಕೊಲೆಯಾದರೆ ದೇಶಾದ್ಯಂತ ಅಲ್ಲೋಲ ಕಲ್ಲೋಲವಾಗುತ್ತದೆ, ವಿವೇಕಾನಂದ ಜನ್ಮದಿನಾಚರಣೆ ಕೋಮುವಾದಿಯಾಗುತ್ತದೆ, ದಲಿತನಲ್ಲದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಬ್ರಾಹ್ಮಣ ಪುರೋಹಿತಶಾಹಿಯನ್ನು ಎಳೇದುತರಲಾಗುತ್ತದೆ. ಅಕಬರ್ -ಬಾಬರ್ ಇತ್ಯಾದಿಗಳಿಗೆ ಒಂದೊಂದು ಪಾಠ ಮುಡಿಪಾಗಿತ್ತು ಇಡಿ ವಿಜಯನಗರ ಇತಿಹಾಸವನ್ನು ಒಂದು ಪುಟಕ್ಕೆ ಸೀಮಿತವಾಗಿದ್ದನ್ನು ಪ್ರಶ್ನಿಸಿದರೆ ಕೋಮುವಾದ ಭುಗಿಲೇಳುತ್ತಿದೆ ಎಂಬುದಾಗಿ ಕೂಗಲಾಗುತ್ತದೆ. ಇಂದಿಗೆ ಅಸತ್ಯವೆಂದು ಸಾಬೀತಾಗಿರುವ ಆರ್ಯ ದ್ರಾವಿಡ ಇತಿಹಾಸವನ್ನೇ ಇನ್ನು ಬಂಡವಾಳ ಮಾಡಿಕೊಂಡು ದೇಶ ವಿಭಜನೆಗೆ ಪ್ರಯತ್ನಿಸಲಾಗುತ್ತದೆ, ಅದನ್ನು ವಿರೋಧಿಸಿದರೆ ಅಸಹಿಶ್ನುತೆಯ ಪಟ್ಟ ಕಟ್ಟಲಾಗುತ್ತದೆ,.
ರಾಮಾಯಣದ ರಾಮ ವ್ಯಭಿಚಾರಿಯೆಂದೂ, ಅವನು ಕಬ್ಬಿಣ ತರಲು ಕಾಡಿಗೆ, ಶ್ರೀಲಂಕಾಕ್ಕೆ ಹೋದನೆಂದೂ ಹೇಳಿದವನಿಗೆ ಪ್ರೊಫೆಸ್ಸರ್ ಗಿರಿ ನೀಡಲಾಗುತ್ತದೆ. ಭಗವದ್ಗೀತೆ ಹಿಂಸಾ ಪ್ರಚೋದಕೆವೆಂದು ಬಡಬಡಿಸುವ ಭಗವಾನನಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಸಾವಿರಾರು ರೈತರು ಸತ್ತಾಗ ಇರಲಾಗದ ಹಣ , ಕಕ್ಕುಲತೆ, ಟಿಪ್ಪೂ ಸುಲ್ತಾನನ ಜನ್ಮದಿನ ಆಚರಣೆಗೆ ಬಿಡುಗಡೆಯಾಗುತ್ತದೆ. ಅದರ ಔಚಿಯ್ತವನ್ನು ಪ್ರಶ್ನಿಸಿ ವಿರೋಧಿಸಿದಾಗ ಅಸಹಿಷ್ಣುತೆಯ ಹೋಗೆ ದೇಶದ ತುಂಬ ವ್ಯಾಪಿಸುತ್ತದೆ.
ಕಂಬಳದ ಕೋಣ ಓಟದ ಸ್ಪರ್ಧೆ, ಜಲ್ಲಿಕಟ್ಟು ಆಚರಣೆಗಳು ಪ್ರಾಣಿಹಿಂಸೆಯ ಪ್ರತೀಕವಾದರೆ, ಬಕೄದಿನ ಕುರಿ, ಒಂಟೆಗಳ ಮಾರಣಹೋಮ ಪ್ರಾಣಿದಯಾ ಸಂಘದ, ಬುದ್ಧಿಜೀವಿಗಳ ಕಣ್ಣಿಗೆ ಕಾಣದೆ ಹೋಗುತ್ತದೆ.
ಇಂದಿನ ಸಹಿಷ್ಣುತೆ ಅಸಹಿಷ್ಣುತೆಗಳ ಚರ್ಚೆ ಧಾರ್ಮಿಕ ವೆನ್ನಿಸಬಹುದಾದ ಹೊದಿಕೆ ಹೊದ್ದಿದ್ದರೂ ಸಹ ಅದರ ಮೂಲವಿರುವುದು ನಮ್ಮ ಇಡಿ ದೇಶದ ಒಂದು ಪಂಗಡ ಇಬ್ಬಂದಿತನದ ವೈಚಾರಿಕ ಪೊಳ್ಳುತನದಲ್ಲಿ. ಪ್ರಾಮಾಣಿಕತೆಯ ದಿವಾಳಿತನದಲಯ್ಲಿ. ಭಿನ್ನತೆ ಜಗದ ನಿಯಮ,. ಪ್ರಕೃತಿಯಲ್ಲಿ ಏಕರೂಪತೆ ಅಸಾಧ್ಯ. ಅದು ರೂಪ ಗುಣಗಳಿರಬಹುದು, ಚಿಂತನೆಯಿರಬಹುದು,ನಂಬಿಕೆ ಆಚರಣೆಗಳಿರಬಹುದು. ಆದರೆ ಪ್ರಾಮಾಣಿಕತೆ ಎಂಬುದು ಸಾಧ್ಯ. ಸಮಸ್ಯೆತ್ಯ ಮೂಲ ಇರುವುದು ಇಲ್ಲಿಯೇ. ಮೊದಲು ಹೇಳಿದ ಸೆಮೆಟಿಕ್ ರಿಲಿಜನ್ ಗಳು ‘’ಆನೋ ಭದ್ರಾ ಕ್ರತುವೋ ಎಂತು ವಿಶ್ವತಃ “ ಎಂಬ ತೆರೆದ ಹಾದಿಯ ಮತಗಳಲ್ಲ.ನಮ್ಮದೇ ಸರಿ. ಉಳಿದವರು heathen ಅಥವಾ ಹರಾಮ್ ಎನ್ನುವ ಮನೋಭಾವದ ಜನ, ನಮ್ಮವರೇ ಬುದ್ಧಿಜೀವಿಗಳ ಮೂಲಕ ಅಸಹಿಷ್ಣುತೆಯ ಆರೋಪವನ್ನು ಸಹಿಷ್ಣುಗಳ ಮೇಲೆ ಹೊರಿಸುತ್ತಿರುವುದು ಒಂದು ವಿಪರ್ಯಾಸಕರ ಬೆಳವಣಿಗೆ. ಈ ಸಂಘರ್ಷ ಇರಬಾರದು ಎಂದು ಆಶಿಸುವುದು ಒಂದು ಹಗಲುಗನಸು ಅಷ್ಟೇ. ವಾಸ್ತವ ಭಿನ್ನವಾದದ್ದು. ಇಸ್ಲಾಮಿನ ಸುನ್ನಿಗಳು ಶಿಯಾ, ಅಹ್ಮದೀಯ ಪಂಗಡಗಳನ್ನು ಸಹಾ ಒಪ್ಪುವ ಸ್ಥಿತಿಯಲ್ಲಿ ಇಲ್ಲದ್ದು ನಾವು ಕಾಣುತ್ತಿದ್ದೇವೆ. ಬಹುಸಂಖ್ಯಾತ ಮುಸ್ಲಿಮರು ಬಾಂಗ್ಲಾ, ಪಾಕಿಸ್ತಾನ, ಕಾಷ್ಮೀರಗಳಲ್ಲಿ ಹಿಂದೂಗಳ ಮಾರಣಹೋಮ ನಡೆಸಿರುವುದನ್ನು ಕಂಡಿದ್ದೇವೆ. ಶಾಂತಿಮಂತ್ರ ಅಲ್ಲಿ ಕೆಲಸಕ್ಕೆ ಬಂದಿಲ್ಲದ್ದನ್ನೂ ನೋಡಿದ್ದೇವೆ. ಮಾನವರನ್ನು ಮಾನವನಾಗಿ ಕಾನು ಎಂಬುದು ಬೃಉಹದಾಶಯವೇ ಸರಿ. ಆದರೆ ಎದುರುಗಿರುವ ಮಾನ ದಾನವ ಪ್ರವೃತ್ತಿಯವನೆಂದಾದಾಗ ನಮ್ಮ ನಿಲುವು ಏನಿರಬೇಕೆಂಬುದು ನಮಗೆ ಸ್ಪಷ್ಟವಾಗಿರಬೇಕು ಅಷ್ಟೇ.
ಭಾರತ ಇಂದು ಭಾರತವಾಗಿ ಉಳಿದಿರುವುದರ ಹಿಂದೆ ದೇಶಪ್ರೇಮಿಗಳ ಧರ್ಮಾಧಕರ ಬೆವರಿದೆ. ಶಿವಾಜಿಯಂಥ ಹೋರಾಟಗಾರರ ಛಲವಿದೆ. ಧರ್ಮದ-ಸಂಸ್ಕೃತಿಯ ಮೇಲಿನ ಒಲವಿದೆ ಭಕ್ತಿಯಿದೆ, ಅಭಿಮಾನವಿದೆ. ಅವನ ತಾಯಿಯಂತಹ ಮಹಿಳೆಯರ ಆದರ್ಶವಿದೆ.ಸಾಮಾಜಿಕವಾಗಿ ಆಚರಿಸಿದ ಧಾರ್ಮಿಕ ಕಾರ್ಯಕ್ರಮಗಳ ಪರಿಣಾಮವಿದೆ. ಮನೆಮನೆಗಳಲ್ಲಿ ಇಟ್ಟು ಪೂಜಿಸಿದ ದೇವ ದೇವರ ಮೇಲಿನ ಶ್ರದ್ಧೆಯಿದೆ.ಕಟ್ಟುವ ಮನಸ್ಸುಗಳಲ್ಲಿ ಸಾಮಾನ್ಯವಾಗಿ ಕಾಣುವ ಗುಣಗಳಿವು.
ಹಿಂದಿನ ವಿಚಾರಗಳನ್ನು ಕೆದಕಬಾರದು ಎನ್ನುವವರು ತಿಳಿಯಬೇಕಾದ ಒಂದು ವಿಚಾರ ‘’ ಅಸತ್ಯ-ಅಪ್ರಾಮಾಣಿಕತೆಯ ವೈಚಾರಿಕ ಪೊಳ್ಳುತನ ಓಲೈಕೆಯಿಂದ ಸಹಿಷ್ಣು ಸಮಾಜ ಕಟ್ಟಲು ಸಾಧ್ಯವಿಲ್ಲ.” ಜಾತಿ ವ್ಯವಸ್ಥೆಗೆ ಬ್ರಾಹ್ಮಣರನ್ನು,ಆರ್ಯರನ್ನು ದೂರುವ ಸಹಿಷ್ಣುಗಳು ಇತಿಹಾಸದಲ್ಲಿ ಚೆನ್ನಾಗಿಯೇ ದಾಖಲಾಗಿರುವ ಹಿಂದೂಗಳ ಮೇಲಿನ ಮುಸ್ಲಿಂ ದಾಳಿಕೋರರ , ರಾಜ ರಾಜರುಗಳ ದಬ್ಬಾಳಿಕೆಯನ್ನು ಪ್ರಾಮಾಣಿಕವಾಗಿ, ಮುಕ್ತವಾಗಿ ಚರ್ಚಿಸಬೇಕು.ಅದನ್ನು ಆ ಸಮುದಾಯ ಒಪ್ಪಿಕೊಳ್ಳುವಂತೆಯೂ ಉತ್ತೇಜಿಸಬೇಕು. ಕಸವನ್ನು ಚಾಪೆಯ ಕೆಳಗೆ ತಳ್ಳಿದರೆ ಅದೇನು ಇಲ್ಲವಾಗುವುದಿಲ್ಲ. ಹುಳಗಳನ್ನು ಬೆಳೆಸುವ ತಿಪ್ಪೆಯಾಗಿ ಮಾರ್ಪಡಬಹುದಷ್ಟೇ.
ಎಲ್ಲರೂ ಒಂದೇ ನಮ್ಮಲ್ಲಿ ವೈಷಮ್ಯ ಬೇಡ, happy ever after ಎಂದು ಆಶಿಸುವ ಹಿಂದೂ ಮನಸ್ಸುಗಳು ಕೇಳಿಕೊಳ್ಳಬಹುದಾದ ಪ್ರಶ್ನೆಯಿದು:
ತೋಳವೊಂದು ಕುರಿಯ ಬಳಿಗೆ ಬಂದು ನಾವಿಬ್ಬರೂ ಒಂದೇ ಭೂಮಿಯ ಮಣ್ಣಿನಿಂದ ಆದವರು. ನನಗೂ ನಿನಗೂ ವ್ಯತ್ಯಾಸವಿಲ್ಲ. ನಾನೀಗ ನಿನ್ನನ್ನು ತಿಂದುಬಿಡುವೆ. ನೀನು ನನ್ನಲ್ಲಿಯೇ ಸೇರಿಹೋಗಿಬಿಡುತ್ತೀಯ.ಹಾಗಾಗಿ ನಿನ್ನದೇನು ನಷ್ಟವಾಗುವುದಿಲ್ಲ ಎಂದಾಗ ಕುರಿ ಏನು ಹೇಳಬೇಕು? ಅಥವಾ ಬುದ್ಧಿ ಜೀವಿಯಾಗಿ ಕುರಿಗೆ ನೀವೇನು ಹೇಳುತ್ತೀರಿ ಎಂಬುದು ಕೇಳಿಕೊಳ್ಳಬೇಕು.